ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಬಗ್ಗೆ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಮಾಹಿತಿ ಶೇರ್ ಮಾಡಿದ್ದಾರೆ.
ಕೊರೊನಾದ ಎಲ್ಲಾ ಮಾರ್ಗಸೂಚಿಗಳನ್ನ ಪಾಲಿಸಿದ ಬಳಿಕವೂ ನನಗೆ ಕೊರೊನಾ ಸೋಂಕು ಬಂದಿದೆ. ನಾನು ಕ್ವಾರಂಟೈನ್ಗೆ ಒಳಗಾಗಿದ್ದು, ವೈದ್ಯರ ಸಲಹೆಯಂತೆ ಔಷಧಿಗಳನ್ನ ಸ್ವೀಕರಿಸುತ್ತಿದ್ದೇನೆ. ನನ್ನ ಜೊತೆ ಸಂಪರ್ಕಕ್ಕೆ ಬಂದವರು ಯಾರೇ ಇದ್ದರೂ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ನಿಖಿಲ್ ಮನವಿ ಮಾಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ತಮ್ಮ ಮುಂಬರುವ ಸಿನಿಮಾ ರೈಡರ್ಗಾಗಿ ಇತ್ತೀಚೆಗೆ ಲೇಹ್ – ಲಡಾಕ್ಗೆ ತೆರಳಿದ್ದರು.
ಇಂದು ಬೆಳಗ್ಗೆಯಷ್ಟೇ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕೂಡ ಕೊರೊನಾ ಸೋಂಕಿಗೆ ಒಳಗಾಗಿರೋದ್ರ ಬಗ್ಗೆ ಟ್ವಿಟರ್ನಲ್ಲಿ ಮಾಹಿತಿ ನೀಡಿದ್ದರು. ಕೆಲ ದಿನಗಳ ಹಿಂದಷ್ಟೇ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಕೂಡ ಕೊರೊನಾ ಸೋಂಕಿಗೆ ಒಳಗಾಗಿದ್ದರು.
https://www.instagram.com/p/CNw0lMYJSVj/?igshid=y23l0p3e9nma