alex Certify HDK ಪುತ್ರ ನಿಖಿಲ್​ ಕುಮಾರಸ್ವಾಮಿಗೂ ಕೊರೊನಾ.​..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

HDK ಪುತ್ರ ನಿಖಿಲ್​ ಕುಮಾರಸ್ವಾಮಿಗೂ ಕೊರೊನಾ.​..!

ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಪುತ್ರ ನಿಖಿಲ್​ ಕುಮಾರಸ್ವಾಮಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಬಗ್ಗೆ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಮಾಹಿತಿ ಶೇರ್​ ಮಾಡಿದ್ದಾರೆ.

ಕೊರೊನಾದ ಎಲ್ಲಾ ಮಾರ್ಗಸೂಚಿಗಳನ್ನ ಪಾಲಿಸಿದ ಬಳಿಕವೂ ನನಗೆ ಕೊರೊನಾ ಸೋಂಕು ಬಂದಿದೆ. ನಾನು ಕ್ವಾರಂಟೈನ್​ಗೆ ಒಳಗಾಗಿದ್ದು, ವೈದ್ಯರ ಸಲಹೆಯಂತೆ ಔಷಧಿಗಳನ್ನ ಸ್ವೀಕರಿಸುತ್ತಿದ್ದೇನೆ. ನನ್ನ ಜೊತೆ ಸಂಪರ್ಕಕ್ಕೆ ಬಂದವರು ಯಾರೇ ಇದ್ದರೂ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ನಿಖಿಲ್​ ಮನವಿ ಮಾಡಿದ್ದಾರೆ.

ನಿಖಿಲ್​ ಕುಮಾರಸ್ವಾಮಿ ತಮ್ಮ ಮುಂಬರುವ ಸಿನಿಮಾ ರೈಡರ್​ಗಾಗಿ ಇತ್ತೀಚೆಗೆ ಲೇಹ್​ – ಲಡಾಕ್​ಗೆ ತೆರಳಿದ್ದರು.

ಇಂದು ಬೆಳಗ್ಗೆಯಷ್ಟೇ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಕೂಡ ಕೊರೊನಾ ಸೋಂಕಿಗೆ ಒಳಗಾಗಿರೋದ್ರ ಬಗ್ಗೆ ಟ್ವಿಟರ್​ನಲ್ಲಿ ಮಾಹಿತಿ ನೀಡಿದ್ದರು. ಕೆಲ ದಿನಗಳ ಹಿಂದಷ್ಟೇ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಕೂಡ ಕೊರೊನಾ ಸೋಂಕಿಗೆ ಒಳಗಾಗಿದ್ದರು.

View this post on Instagram

A post shared by Nikhil Kumaraswamy (@nikhilgowda_jaguar)

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...