alex Certify ಬಸ್ ಸಂಚಾರ ಆರಂಭಿಸಿದ KSRTC ಯಿಂದ ಮತ್ತೊಂದು ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಸಂಚಾರ ಆರಂಭಿಸಿದ KSRTC ಯಿಂದ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಇಂದಿನಿಂದ ಬಸ್ ಸಂಚಾರ ಆರಂಭಿಸಲಾಗಿದೆ. ಆದರೆ, ಸಮಯದ ಕಾರಣದಿಂದ ಅನೇಕ ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭವಾಗಿಲ್ಲ. ಇನ್ನು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸಂಜೆ 7 ಗಂಟೆಯವರೆಗೆ ಕೆಎಸ್ಆರ್ಟಿಸಿ ಬಸ್ ಗಳ ಕಾರ್ಯಾಚರಣೆ ನಡೆಯಲಿದೆ.

ದೂರದ ಜಿಲ್ಲೆಗಳಿಗೆ ರಾತ್ರಿ ವೇಳೆಯೂ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಬಸ್ ಸಂಚಾರದ ಸಮಯವನ್ನು ವಿಸ್ತರಿಸಲಾಗಿದೆ. ಈ ಮೊದಲು ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು.

ಆದರೆ ಉತ್ತರ ಕರ್ನಾಟಕ ಭಾಗದ ದೂರದ ಊರುಗಳಿಗೆ ಹೋಗಲು ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ವೇಳೆಯೂ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...