alex Certify BIG NEWS: ಇಂದಿರಾ ಕ್ಯಾಂಟೀನ್​ನಲ್ಲಿ ಉಚಿತ ಆಹಾರ ಪೂರೈಕೆಗೆ ರಾಜ್ಯ ಸರ್ಕಾರದಿಂದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದಿರಾ ಕ್ಯಾಂಟೀನ್​ನಲ್ಲಿ ಉಚಿತ ಆಹಾರ ಪೂರೈಕೆಗೆ ರಾಜ್ಯ ಸರ್ಕಾರದಿಂದ ಸೂಚನೆ

ರಾಜ್ಯದಲ್ಲಿ ಕೊರೊನಾ 2ನೇ ನಿಯಂತ್ರಣದ ಹಿನ್ನೆಲೆಯಲ್ಲಿ ಮೇ 24ರವರೆಗೂ ರಾಜ್ಯ ಸರ್ಕಾರ ಲಾಕ್​ಡೌನ್​ ಆದೇಶ ವಿಧಿಸಿದೆ. ಈ ಸಮಯದಲ್ಲಿ ಯಾರೂ ಉಪವಾಸದಿಂದ ಇರಬಾರದು ಎಂಬ ಕಾರಣಕ್ಕೆ ಇಂದಿರಾ ಕ್ಯಾಂಟೀನ್​ನಲ್ಲಿ ಸಾರ್ವಜನಿಕರಿಗೆ ಉಚಿತ ಆಹಾರ ಒದಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ʼಕೊರೊನಾʼ ನಿಯಂತ್ರಣಕ್ಕೆ ಜನತೆ ಬಳಿ ಸಹಕಾರ ಕೋರಿದ ಸಿಎಂ ಯಡಿಯೂರಪ್ಪ

ಕೊರೊನಾ ನಿಯಂತ್ರಣ ಮಾಡುವ ಸಲುವಾಗಿ ರಾಜ್ಯದಲ್ಲಿ ಮೇ 10ರಿಂದ ಮೇ 24ನೇ ತಾರೀಖಿನಿವರೆಗೆ ಲಾಕ್​ಡೌನ್​ ಆದೇಶ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟವನ್ನ ಎದುರಿಸುವ ದಿನಗೂಲಿ ಕಾರ್ಮಿಕರು ಸೇರಿದಂತೆ ಬಡತನ ರೇಖೆಯ ಕೆಳಗಿರುವ ಯಾರೂ ಸಹ ಉಪವಾಸದಿಂದ ಇರಬಾರದು. ಹೀಗಾಗಿ ಇಂದಿರಾ ಕ್ಯಾಂಟೀನ್​ನಲ್ಲಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನ ಉಚಿತವಾಗಿ ನೀಡುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಅನ್ವಯವಾಗುವಂತೆ ಸುತ್ತೋಲೆಯನ್ನ ಪ್ರಕಟಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...