ಬೆಂಗಳೂರು: ಪಶ್ಚಿಮಘಟ್ಟ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬಂಧಿಸಿದಂತೆ ಕಸ್ತೂರಿ ರಂಗನ್ ವರದಿ ಜಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಆದೇಶ ನೀಡಿದೆ.
ಡಿಸೆಂಬರ್ 31ರೊಳಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳಲು ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಸೂಚಿಸಿದೆ. ವಿಳಂಬ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಹೀಗಾಗಿ ಕೇಂದ್ರ ಸರ್ಕಾರ ಅನಿವಾರ್ಯವಾಗಿ ಪಶ್ಚಿಮಘಟ್ಟ ಸೂಕ್ಷ್ಮ ಪ್ರದೇಶ ಕುರಿತಂತೆ ತೀರ್ಮಾನ ಕೈಗೊಂಡು ಅಧಿಸೂಚನೆ ಹೊರಡಿಸಬೇಕಿದ್ದು, ಈ ವಿಚಾರ ರಾಜ್ಯಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಮತ್ತೆ ಸಂಘರ್ಷಕ್ಕೆ ಕಾರಣವಾಗಬಹುದು ಎಂದು ಹೇಳಲಾಗಿದೆ.