ಶಿವಮೊಗ್ಗ: ಸಿಇಟಿ ಮತ್ತು ಪದವಿ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಎಸ್.ಎಸ್.ಯು.ಐ. ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗದ ವಿನೋಬನಗರದಲ್ಲಿರುವ ಯಡಿಯೂರಪ್ಪ ಅವರ ನಿವಾಸದ ಬಳಿ ಎಸ್.ಎಸ್.ಯು.ಐ. ಕಾರ್ಯಕರ್ತರು ಪಿಪಿಇ ಕಿಟ್ ಧರಿಸಿ ಪ್ರತಿಭಟನೆ ನಡೆಸಿದ್ದು ಸಿಇಟಿ ಮತ್ತು ಪದವಿ ಪರೀಕ್ಷೆಗಳನ್ನು ಮುಂದೂಡಬೇಕೆಂದು ಒತ್ತಾಯಿಸಿದ್ದಾರೆ. ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ರಾಜ್ಯದಲ್ಲಿ ಕೊರೋನಾ ಹೆಚ್ಚಾಗುತ್ತಿದ್ದು ನಿಯಂತ್ರಣಕ್ಕೆ ಬರುತ್ತಿಲ್ಲ. ಇಂತಹ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸಬಾರದು ಎಂದು ಪ್ರತಿಭಟನಾನಿರತರು ಒತ್ತಾಯಿಸಿದ್ದಾರೆ.