5 ನೇ ತರಗತಿವರೆಗೆ ಆನ್ ಲೈನ್ ತರಗತಿ ನಡೆಸದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈಗಾಗಲೇ ಸೂಚನೆ ನೀಡಿದ್ದಾರೆ.
ಆದರೆ, 7 ನೇ ತರಗತಿವರೆಗೂ ಆನ್ ಲೈನ್ ತರಗತಿ ರದ್ದು ಮಾಡಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸಮಸ್ಯೆ ಪರಿಗಣಿಸಿ ಆನ್ ಲೈನ್ ತರಗತಿಗಳನ್ನು 9 ನೇ ತರಗತಿವರೆಗೂ ನಡೆಸಬಾರದು ಎನ್ನುವ ಒತ್ತಾಯ ಕೇಳಿ ಬಂದಿದೆ.
ಆನ್ಲೈನ್ ಕ್ಲಾಸ್ ವಿಚಾರದಲ್ಲಿ ಸಚಿವರಲ್ಲಿಯೇ ಗೊಂದಲವಾಗಿದೆ. 1 -7 ತರಗತಿವರೆಗೆ ಆನ್ಲೈನ್ ತರಗತಿ ರದ್ದು ಮಾಡಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7 ನೇ ತರಗತಿವರೆಗೆ ಆನ್ಲೈನ್ ತರಗತಿಗಳನ್ನು ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
5 ನೇ ತರಗತಿವರೆಗೆ ಮಾತ್ರ ಆನ್ಲೈನ್ ತರಗತಿಗಳನ್ನು ರದ್ದು ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. 7ನೇ ತರಗತಿವರೆಗೆ ಆನ್ಲೈನ್ ರದ್ದು ಮಾಡುವ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ಸಂಪುಟ ಸಭೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸಮಸ್ಯೆ ಬಗ್ಗೆ ಚರ್ಚಿಸಿ 7 ನೇ ತರಗತಿವರೆಗೆ ಆನ್ ಲೈನ್ ಕ್ಲಾಸ್ ನಡೆಸದಿರಲು ಒತ್ತಾಯಿಸಲಾಗಿದೆ. ಆದರೆ, ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಲಾಗಿದೆ.