
ಬೆಂಗಳೂರು: ಕೊರೋನಾ ಕಾರಣದಿಂದಾಗಿ ಆನ್ಲೈನ್ ಕ್ಲಾಸ್ ನಡೆಸಲಾಗುತ್ತಿದ್ದು, ಈ ವೇಳೆ ವಿದ್ಯಾರ್ಥಿಯೊಬ್ಬ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ.
ಬೆಂಗಳೂರಿನ ಆನೇಕಲ್ ತಾಲೂಕು ಜಿಗಣಿ ಹೋಬಳಿಯಲ್ಲಿರುವ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ನಡೆಸಲಾಗುತ್ತಿದೆ. ಉಪನ್ಯಾಸಕಿ ಪಾಠ ಮಾಡುವ ವೇಳೆಯಲ್ಲಿ ವಿದ್ಯಾರ್ಥಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ.
ಅಸಭ್ಯವಾಗಿ ಲೈಂಗಿಕ ಪದ ಬಳಕೆ ಮಾಡಿದ್ದಾನೆ. ಈ ಕುರಿತಾಗಿ ಜಿಗಣಿ ಠಾಣೆ ಪೊಲೀಸರಿಗೆ ಉಪನ್ಯಾಸಕಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.