ಬೆಂಗಳೂರು: ಆನ್ಲೈನ್ ಶಿಕ್ಷಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದ್ದು ಎಲ್.ಕೆ.ಜಿ.ಯಿಂದ 5ನೇ ತರಗತಿಯವರೆಗೆ ಆನ್ಲೈನ್ ಶಿಕ್ಷಣ ಇರುವುದಿಲ್ಲ.
6 ನೇ ತರಗತಿಯಿಂದ 10ನೇ ತರಗತಿಯವರೆಗೆ ಆನ್ಲೈನ್ ಶಿಕ್ಷಣಕ್ಕೆ ಮಾರ್ಗಸೂಚಿ ರೂಪಿಸಲು 11 ಜನರ ಸಮಿತಿಯನ್ನು ರಚಿಸಲಾಗಿದೆ. ಈ ಬಗ್ಗೆ 10 ದಿನದಲ್ಲಿ ಸಮಿತಿ ವರದಿ ನೀಡಲಿದೆ.
ಇನ್ನು ಆನ್ಲೈನ್ ಶಿಕ್ಷಣದ ಹೆಸರಲ್ಲಿ ಯಾವುದೇ ಶುಲ್ಕ ವಸೂಲಿ ಮಾಡಬಾರದು ಎಂದು ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ ನೀಡಲಾಗಿದೆ.
ಎಲ್.ಕೆ.ಜಿ.ಯಿಂದ 5ನೇ ತರಗತಿಯವರೆಗೆ ತಂತ್ರಜ್ಞಾನ ಆಧಾರಿತ ಶಿಕ್ಷಣ ಬೋಧನೆಗೆ ಸೂಚನೆ ನೀಡಲಾಗಿದೆ. ಎಲ್.ಕೆ.ಜಿ.ಯಿಂದ 5 ನೇ ತರಗತಿಯವರೆಗೆ ಆನ್ಲೈನ್ ಶಿಕ್ಷಣವನ್ನು ಸ್ಥಗಿತಗೊಳಿಸಲಾಗಿದೆ.