alex Certify ಮಕ್ಕಳಿಗೆ ಆನ್ಲೈನ್ ಶಿಕ್ಷಣ ಅಪಾಯ: ಆಘಾತಕಾರಿ ಮಾಹಿತಿ ನೀಡಿದ ತಜ್ಞರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಿಗೆ ಆನ್ಲೈನ್ ಶಿಕ್ಷಣ ಅಪಾಯ: ಆಘಾತಕಾರಿ ಮಾಹಿತಿ ನೀಡಿದ ತಜ್ಞರು

ಬೆಂಗಳೂರು: 6 ವರ್ಷದೊಳಗಿನ ಮಕ್ಕಳಿಗೆ ಆನ್ಲೈನ್ ಶಿಕ್ಷಣ ನೀಡುವುದು ಅಪಾಯಕಾರಿ ಎಂದು ಹೇಳಲಾಗಿದೆ. ಈ ಕುರಿತಾಗಿ ನಿಮ್ಹಾನ್ಸ್ ಸರ್ಕಾರಕ್ಕೆ ಸಲಹೆ ನೀಡಿದ್ದು 6 ವರ್ಷದೊಳಗಿನ ಮಕ್ಕಳಿಗೆ ಒಂದು ಗಂಟೆಗಿಂತ ಹೆಚ್ಚಿನ ಸಮಯ ಡಿಜಿಟಲ್ ಸ್ಕ್ರೀನ್ ನೋಡಿದರೆ ಕಣ್ಣುಗಳ ಮೇಲೆ ಪರಿಣಾಮ ಬೀರುತ್ತದೆ. ಜೊತೆಗೆ ದೈಹಿಕ ಮತ್ತು ಮಾನಸಿಕ ತೊಂದರೆ ಆಗುತ್ತದೆ. 6 ವರ್ಷದೊಳಗಿನ ಮಕ್ಕಳಿಗೆ ಆನ್ಲೈನ್ ತರಗತಿಗಳನ್ನು ನಡೆಸುವುದು ಬೇಡವೆಂದು ಸಲಹೆ ನೀಡಲಾಗಿದೆ.

ನಿಮ್ಹಾನ್ಸ್ ವತಿಯಿಂದ ಸರ್ಕಾರಕ್ಕೆ ಸಲಹೆ ನೀಡಲಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆಯ ವರದಿ ಅನ್ವಯ 6 ವರ್ಷದೊಳಗಿನ ಮಕ್ಕಳಿಗೆ ಒಂದು ಗಂಟೆಗಿಂತ ಹೆಚ್ಚು ಅವಧಿ ಡಿಜಿಟಲ್ ಸ್ಕ್ರೀನ್ ನೋಡಿದರೆ ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತದೆ.

ಎಲ್ಕೆಜಿ-ಯುಕೆಜಿ ಸೇರಿದಂತೆ 6 ವರ್ಷದೊಳಗಿನ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಹೇಳಿಕೊಡುವ ತರಬೇತಿ ನಮ್ಮಲ್ಲಿ ಇಲ್ಲ. ಅನುಭವ ಕೊರತೆ ಕೂಡ ಇದೆ. ಈಗ ಆನ್ಲೈನ್ ಶಿಕ್ಷಣದ ಹೆಸರಲ್ಲಿ ಮಕ್ಕಳನ್ನು ಪ್ರಯೋಗಕ್ಕೆ ಒಳಪಡಿಸುವುದು ಕ್ರಿಮಿನಲ್ ಅಪರಾಧವಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ ವರದಿಯನ್ನು ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...