alex Certify ಆನ್ ಲೈನ್ ತರಗತಿ ಹೆಸರಲ್ಲಿ ಶೋಷಣೆ: ಮಕ್ಕಳು, ಪೋಷಕರಿಗೆ ‘ಮುಖ್ಯ ಮಾಹಿತಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆನ್ ಲೈನ್ ತರಗತಿ ಹೆಸರಲ್ಲಿ ಶೋಷಣೆ: ಮಕ್ಕಳು, ಪೋಷಕರಿಗೆ ‘ಮುಖ್ಯ ಮಾಹಿತಿ’

ಬೆಂಗಳೂರು: ಲಾಕ್ ಡೌನ್ ಜಾರಿಯಲ್ಲಿರುವ ಕಾರಣ ರಾಜ್ಯದ ಕೆಲವು ಶಾಲೆಗಳಲ್ಲಿ ಆನ್ಲೈನ್ ತರಗತಿ ಆರಂಭಿಸಲಾಗಿದೆ. ಈ ಮೂಲಕ ಪೋಷಕರಿಂದ ಹೆಚ್ಚಿನ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂಬ ದೂರು ಕೇಳಿಬಂದಿವೆ.

ಇಂತಹ ಕ್ರಮ ಸರಿಯಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಕೆಲವು ಶಾಲೆಗಳಿಂದ ಎಲ್ಕೆಜಿ-ಯುಕೆಜಿ ಮತ್ತು ಪ್ರಾಥಮಿಕ ಶಾಲೆ ಮಕ್ಕಳಿಗೆ ಆನ್ಲೈನ್ ತರಗತಿ ನಡೆಸಲು ಮುಂದಾಗಿದ್ದು ಪೋಷಕರಿಂದ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎನ್ನುವ ದೂರುಗಳು ಕೇಳಿಬಂದಿವೆ. ಮಕ್ಕಳಿಗೆ ಆನ್ಲೈನ್ ತರಗತಿ ಅವಶ್ಯಕತೆ ಇದೆಯೇ? ಇಲ್ಲವೇ? ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲದೆ ಈ ರೀತಿ ಶೋಷಣೆ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಹೊರೆಯಾಗದ ರೀತಿಯಲ್ಲಿ ಆನ್ಲೈನ್ ಶಿಕ್ಷಣ ನೀಡಲು ಶಿಕ್ಷಣ ಸಂಸ್ಥೆಗಳಿಗೆ ಅನುಮತಿ  ನೀಡಲಾಗಿದೆ. ಅವಶ್ಯಕತೆ ಇಲ್ಲದಿರುವ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೂ ಕೂಡ ಆನ್ಲೈನ್ ಶಿಕ್ಷಣ ನೀಡುತ್ತೇವೆ ಎಂದು ಕೆಲವು ಶಾಲೆಗಳು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಶೋಷಿಸುತ್ತಿರುವುದು ಕಂಡುಬರುತ್ತಿದೆ ಎಂದು ತಿಳಿಸಿದ್ದಾರೆ.

ಯಾವುದೇ ಖಾಸಗಿ ಶಾಲೆಗಳು ಆನ್ಲೈನ್ ತರಗತಿಗಳನ್ನು ನಡೆಸಬೇಕಾದರೆ ವೈಜ್ಞಾನಿಕ ಆಧಾರಗಳಿಲ್ಲದೆ ಮಕ್ಕಳ ಅನವಶ್ಯಕ ಶೋಷಣೆಗೆ ಮುಂದಾಗಬಾರದು. ಯಾವ ಸಂದರ್ಭದಲ್ಲಿಯೂ ಮಕ್ಕಳ ಮೇಲೆ ಉಂಟಾಗುವ ಪರಿಣಾಮಗಳನ್ನು ಗಮನದಲ್ಲಿ ಇಟ್ಟುಕೊಂಡು ಆನ್ಲೈನ್ ಶಿಕ್ಷಣ ನೀಡಬೇಕು ಎಂದು ಸೂಚಿಸಿದ್ದಾರೆ.

ಅವೈಜ್ಞಾನಿಕವಾಗಿ ದಿನವಿಡಿ ಆನ್ ಲೈನ್ ತರಗತಿಗಳನ್ನು ನಡೆಸುವ ಮೂಲಕ ತರಗತಿ ಬೋಧನೆಗೆ ಪರ್ಯಾಯವೆಂದು ಭಾವಿಸಿ ಶೈಕ್ಷಣಿಕ ಚಟುವಟಿಕೆಗಳನ್ನು ಪೂರ್ಣಗೊಳಿಸುವುದು ಸಮರ್ಥನೀಯವಲ್ಲ. ಇಂತಹ ಅವೈಜ್ಞಾನಿಕ ಅಕ್ರಮಗಳಿಗೆ ಕಡಿವಾಣ ಹಾಕಬೇಕೆಂದು ಸಚಿವರು ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...