ಬೆಂಗಳೂರು: ಪೋಷಕರ ಅಭಿಪ್ರಾಯ ಸಂಗ್ರಹಿಸಿ ಶಾಲೆ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು. ಎಲ್ಲವೂ ಅಂದುಕೊಂಡಂತೆ ನಡೆದರೆ ಸೆಪ್ಟೆಂಬರ್ ವೇಳೆಗೆ ಶಾಲೆಗಳು ಆರಂಭವಾಗುವ ಸಾಧ್ಯತೆಯಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಈ ಕುರಿತಾಗಿ ಸುಳಿವು ನೀಡಿದ್ದಾರೆ. ಪರೀಕ್ಷೆ, ಮೌಲ್ಯಮಾಪನ, ಫಲಿತಾಂಶ ಪ್ರಕಟ, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಅಂದುಕೊಂಡಂತೆ ಮುಕ್ತಾಯವಾದಲ್ಲಿ ಪೋಷಕರ ಅಭಿಪ್ರಾಯವನ್ನು ಪಡೆದು ಶಾಲೆಗಳನ್ನು ಆರಂಭಿಸುವ ಚಿಂತನೆ ಇದೆ.
ಶಾಲೆಗಳು ಯಾವಾಗ ಆರಂಭವಾಗಲಿವೆ ಎಂಬುದನ್ನು ಖಚಿತವಾಗಿ ಹೇಳಲಾಗುವುದಿಲ್ಲ. ಪರಿಸ್ಥಿತಿಯನ್ನು ಗಮನಿಸಿ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಸೆಪ್ಟಂಬರ್ ಗಿಂತ ಮೊದಲೇ ಫಲಿತಾಂಶ ಪ್ರಕಟ, ಶಿಕ್ಷಕರ ವರ್ಗಾವಣೆ ಪೂರ್ಣಗೊಳಿಸಲಾಗುವುದು. ಎಲ್ಲವೂ ಅಂದುಕೊಂಡಂತೆ ನಡೆದರೆ ಸೆಪ್ಟೆಂಬರ್ ವೇಳೆಗೆ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಬಹುದು ಎಂದು ಸಚಿವರು ತಿಳಿಸಿದ್ದಾರೆ.
ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಪೋಷಕರಿಗೆ ಆತಂಕ ಬೇಡ ಎಂದು ಸಚಿವರು ಭರವಸೆ ನೀಡಿದ್ದಾರೆ.