ಬೆಂಗಳೂರು: ರಾಜ್ಯದ ಮಲೆನಾಡು, ಬಯಲುಸೀಮೆ, ಕರಾವಳಿ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಮಳೆಯಾಗಿದ್ದು, ನದಿ, ಕೆರೆಕಟ್ಟೆಗಳೆಲ್ಲ ತುಂಬಿ ಹರಿದಿವೆ.
ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ನದಿಗಳು ಉಕ್ಕಿ ಹರಿದಿದ್ದು ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 50 ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡವನ್ನೂರು ಸಮೀಪ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಮೃತಪಟ್ಟಿದ್ದಾರೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ಜುಲೈ 19, 20 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳವರೆಗೆ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.