
ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಆಸ್ಕರ್ ಫರ್ನಾಂಡಿಸ್ ಅವರಿಗೆ ಚಿಕಿತ್ಸೆ ನೀಡಲಾಗಿದ್ದು ಆರೋಗ್ಯ ಸ್ಥಿರವಾಗಿದೆ.
ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಅವರು ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಲಾಗಿದೆ.