ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಪೋಟವಾಗಿ ವೈದ್ಯ ಸೇರಿ ಮೂವರು ಗಾಯಗೊಂಡಿದ್ದಾರೆ. ತುರ್ತು ಚಿಕಿತ್ಸಾ ಘಟಕದಲ್ಲಿ ಆಕ್ಸಿಜನ್ ಖಾಲಿಯಾಗಿದ್ದ ಕಾರಣ ಬದಲಿ ಸಿಲಿಂಡರ್ ಜೋಡಿಸುವಾಗ ತಾಂತ್ರಿಕ ದೋಷದಿಂದ ಸಿಲಿಂಡರ್ ಸ್ಪೋಟಗೊಂಡಿದೆ ಎನ್ನಲಾಗಿದೆ.
ಸಿಲಿಂಡರ್ ಜೋಡಣೆ ವೇಳೆ ಸ್ಪೋಟವಾಗಿದ್ದು, ವೈದ್ಯ, ನರ್ಸ್ ಹಾಗೂ ವಾರ್ಡ್ ಬಾಯ್ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.