alex Certify ರಾಜ್ಯದಲ್ಲಿ ಆಕ್ಸಿಜನ್​ ಹಾಹಾಕಾರ: ಚಾಮರಾಜನಗರ ಬಳಿಕ ಇದೀಗ ಕಲಬುರಗಿಯಲ್ಲಿ ಪ್ರಾಣವಾಯು ಸಿಗದೇ ಸೋಂಕಿತರು ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಆಕ್ಸಿಜನ್​ ಹಾಹಾಕಾರ: ಚಾಮರಾಜನಗರ ಬಳಿಕ ಇದೀಗ ಕಲಬುರಗಿಯಲ್ಲಿ ಪ್ರಾಣವಾಯು ಸಿಗದೇ ಸೋಂಕಿತರು ಸಾವು..!

ಬೇರೆ ರಾಜ್ಯಗಳಲ್ಲಿ ವರದಿಯಾಗುತ್ತಿದ್ದ ಆಕ್ಸಿಜನ್ ಅಭಾವದ ಸಮಸ್ಯೆ ಇದೀಗ ರಾಜ್ಯದಲ್ಲೂ ಶುರುವಾಗಿದೆ. ನಿನ್ನೆಯಷ್ಟೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಸಿಗದೇ ಬರೋಬ್ಬರಿ 23 ಮಂದಿ ಉಸಿರು ಚೆಲ್ಲಿದ್ದಾರೆ. ಪ್ರಾಣವಾಯು ಕೊರತೆಯಿಂದಾಗಿ ಚಾಮರಾಜನಗದಲ್ಲಿ ಈ ಸಾಮೂಹಿಕ ಸಾವು ಸಂಭವಿಸಿದ್ದರ ಬೆನ್ನಲ್ಲೇ ಇದೀಗ ಕಲಬುರಗಿಯಲ್ಲೂ ಇಂತದ್ದೇ ಪ್ರಕರಣ ವರದಿಯಾಗಿದೆ.

ಕಲಬುರಗಿಯ ಅಫಜಲ್​ಪುರ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಸಿಗದೇ ನಾಲ್ವರು ಸಾವನ್ನಪ್ಪಿದ್ದಾರೆ. ಈ ಆಸ್ಪತ್ರೆಯಲ್ಲಿ 32 ಮಂದಿ ಸೋಂಕಿತರಿಗೆ ಆಕ್ಸಿಜನ್​ ಸಿಲಿಂಡರ್​ ವ್ಯವಸ್ಥೆ ಮಾಡಲಾಗಿತ್ತು. ಆದರೆ ನಿನ್ನೆ ಸಂಜೆ 7 ಗಂಟೆಯಿಂದ ಆಕ್ಸಿಜನ್​ ಅಭಾವ ಕಂಡು ಬಂದ ಹಿನ್ನೆಲೆ ಈ ದುರ್ಘಟನೆ ಸಂಭವಿಸಿದೆ. ಆಸ್ಪತ್ರೆ ಆವರಣದಲ್ಲಿ ಸಂಬಂಧಿಕರ ಗೋಳಾಟ ಮುಗಿಲುಮುಟ್ಟಿದೆ.

ಇನ್ನು ಈ ವಿಚಾರವಾಗಿ ಮಾತನಾಡಿ ಅಫಜಲ್​ಪುರ ಟಿಹೆಚ್​ಒ ರತ್ನಾಕರ್​, ಆಸ್ಪತ್ರೆಯಲ್ಲಿ 32 ಮಂದಿ ಸೋಂಕಿತರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಉಂಟಾಗಿರುವ ಬಗ್ಗೆ ಡಿಸಿ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...