alex Certify ಸಮಾಜ ಕಲ್ಯಾಣ ಇಲಾಖೆಯಿಂದ ಗುಡ್ ನ್ಯೂಸ್: ಖಾತೆಗೆ 5 ಸಾವಿರ ರೂ. ಜಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಮಾಜ ಕಲ್ಯಾಣ ಇಲಾಖೆಯಿಂದ ಗುಡ್ ನ್ಯೂಸ್: ಖಾತೆಗೆ 5 ಸಾವಿರ ರೂ. ಜಮಾ

ಬೆಂಗಳೂರು: ಶ್ರಮಿಕ ವರ್ಗಕ್ಕೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ನೀಡಿದೆ. ಅದೇ ರೀತಿ ವಿವಿಧ ಸಮುದಾಯಗಳಿಂದ ಪ್ಯಾಕೇಜ್ ಗೆ ಒತ್ತಡ ಬಂದಿದೆ.

ಚರ್ಮ ಕುಶಲಕರ್ಮಿಗಳಿಗೆ ಸಮಾಜಕಲ್ಯಾಣ ಇಲಾಖೆ ಪ್ಯಾಕೇಜ್ ಘೋಷಿಸಿದೆ. ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ 11,722 ಚರ್ಮ ಕುಶಲಕರ್ಮಿಗಳ ಕುಟುಂಬಗಳಿಗೆ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಚರ್ಮ ಕುಶಲಕರ್ಮಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಂದಿಸಿದ್ದು ನೆರವಿನ ವಿಶೇಷ ಪ್ಯಾಕೇಜ್ ಪ್ರಕಟಿಸಿದ್ದಾರೆ. ಚರ್ಮ ಕುಶಲಕರ್ಮಿಗಳ ಕುಟುಂಬಕ್ಕೆ ಡಾ. ಬಾಬು ಜಗಜೀವನರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ನೆರವು ನೀಡಲಿದ್ದು 11,722 ಫಲಾನುಭವಿಗಳ ಖಾತೆಗೆ 5 ಸಾವಿರ ರೂಪಾಯಿ ನೇರವಾಗಿ ಜಮಾ ಮಾಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...