alex Certify ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ವಿರುದ್ಧ ಎಫ್ಐಆರ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಚಿವ ಪರಮೇಶ್ವರ್ ನಾಯ್ಕ್ ವಿರುದ್ಧ ಎಫ್ಐಆರ್ ದಾಖಲು

ಬಳ್ಳಾರಿ: ಮಾಜಿ ಸಚಿವರ ಮಗನ ಮದುವೆ ಆರತಕ್ಷತೆಯಲ್ಲಿ ನಿಯಮ ಉಲ್ಲಂಘನೆ ಆದ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಮಾಜಿ ಸಚಿವ ಪರಮೇಶ್ವರ ನಾಯ್ಕ್ ಮತ್ತು ಅವರ ಪುತ್ರನ ವಿರುದ್ಧ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಪುತ್ರ ಭರತ್ ಮೊದಲನೇ ಆರೋಪಿ, ತಂದೆ ಪರಮೇಶ್ವರ್ ನಾಯ್ಕ್ ಎರಡನೇ ಆರೋಪಿಯಾಗಿದ್ದಾರೆ. ಹರಪನಹಳ್ಳಿ ತಹಶೀಲ್ದಾರ್ ನಾಗವೇಣಿ ಅವರ ದೂರಿನ ಮೇರೆಗೆ ಕೇಸ್ ದಾಖಲಿಸಲಾಗಿದೆ.

ಲಕ್ಷ್ಮಿಪುರದಲ್ಲಿ ಪರಮೇಶ್ವರ್ ನಾಯ್ಕ್ ಅವರ ಪುತ್ರನ ಮದುವೆ ಸಮಾರಂಭ ನೆರವೇರಿದ್ದು, ಮಾಜಿ ಸಿಎಂ ಸಿದ್ಧರಾಮಯ್ಯ, ಮಾಜಿ ಡಿಸಿಎಂ ಪರಮೇಶ್ವರ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಶ್ರೀರಾಮುಲು ಸೇರಿದಂತೆ ಅನೇಕ ನಾಯಕರು, ಸಾವಿರಾರು ಮಂದಿ ಭಾಗಿಯಾಗಿದ್ದಾರೆ.

ಮದುವೆಯಲ್ಲಿ 50 ಕ್ಕಿಂತ ಹೆಚ್ಚು ಮಂದಿ ಸೇರಬಾರದೆಂಬ ನಿಯಮವಿದ್ದರೂ, ಸಾವಿರಾರು ಮಂದಿ ಭಾಗಿಯಾಗಿದ್ದು, ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ನಿಯಮ ಉಲ್ಲಂಘಿಸಲಾಗಿದೆ.

ಕಡಿಮೆ ಸಂಖ್ಯೆಯಲ್ಲಿ ಜನ ಬರುವಂತೆ ಮನವಿ ಮಾಡಿದ್ದರೂ ಭಾರೀ ಸಂಖ್ಯೆಯಲ್ಲಿ ಬಂದಿದ್ದರಿಂದ ಸಣ್ಣ ವ್ಯತ್ಯಾಸವಾಗಿದೆ ಎಂದು ಪರಮೇಶ್ವರ್ ನಾಯ್ಕ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...