ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಸದ್ಯಕ್ಕೆ ಆರಂಭಿಸುವುದಿಲ್ಲ.
ಮಾರ್ಚ್ ನಿಂದಲೂ ಮನೆಯಲ್ಲೇ ಉಳಿದುಕೊಂಡ ಮಕ್ಕಳಿಗೆ ಆನ್ಲೈನ್ ಮೂಲಕ ತರಗತಿಗಳು ನಡೆಯುತ್ತಿವೆ. ಆದರೆ ಇದರಿಂದ ಹೆಚ್ಚಿನ ಮಕ್ಕಳಿಗೆ ಅನುಕೂಲವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳ ಅಭ್ಯಾಸ ಪುಸ್ತಕವನ್ನು ಪಿಡಿಎಫ್ ರೂಪದಲ್ಲಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಆನ್ಲೈನ್ ನಲ್ಲಿ ಅಪ್ ಲೋಡ್ ಮಾಡಿದೆ.
ಪ್ರಾಥಮಿಕ ಮತ್ತು ಪ್ರೌಢ ಶಾಲೆ ಮಕ್ಕಳ ಅಭ್ಯಾಸ ಪುಸ್ತಕವನ್ನು ಆನ್ಲೈನ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ. ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಶಾಲೆ ಆರಂಭ ವಿಳಂಬವಾಗಿರುವುದು ರಿಂದ ಆನ್ಲೈನ್ನಲ್ಲಿ ಅಭ್ಯಾಸ ಪುಸ್ತಕಗಳನ್ನು ಅಪ್ಲೋಡ್ ಮಾಡಿದ್ದು, http://dsert.kar.nic.in ನಲ್ಲಿ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಲಾಗಿದೆ.
ಇನ್ನು ಸಿಬಿಎಸ್ಸಿ ಮಾದರಿಯಲ್ಲಿ ರಾಜ್ಯದಲ್ಲಿಯೂ ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಶೇಕಡ 30ರಷ್ಟು ಪಠ್ಯವನ್ನು ಕಡಿತ ಮಾಡುವ ಕುರಿತು ಶಿಕ್ಷಣ ಇಲಾಖೆ ಇನ್ನೊಂದು ವಾರದೊಳಗೆ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.