ಬೆಂಗಳೂರು: ಕೊರೊನಾ ಸೋಂಕು ತಡೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಜುಲೈ 14 ರಿಂದ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಈಗಾಗಲೇ ಲಾಕ್ಡೌನ್ ನಿಂದ ತತ್ತರಿಸಿರುವ ಜನತೆಗೆ ಮತ್ತೆ ಲಾಕ್ಡೌನ್ ಜಾರಿ ಮಾಡುವುದರಿಂದ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಸಾವಿರಾರು ಜನ ಊರಿಗೆ ತೆರಳಿದ್ದಾರೆ.
ಬೆಂಗಳೂರಿನ ಯಶವಂತಪುರ ರೈಲ್ವೇ ನಿಲ್ದಾಣದಿಂದ ದುರಂತೋ ಎಕ್ಸ್ ಪ್ರೆಸ್ ರೈಲಿನ ಮೂಲಕ 800 ಕ್ಕೂ ಹೆಚ್ಚು ಕಾರ್ಮಿಕರು ತಮ್ಮ ಊರುಗಳತ್ತ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನಿಂದ ಕೊಲ್ಕತ್ತಾಕ್ಕೆ ತೆರಳಲಿರುವ ದುರಂತೋ ಎಕ್ಸ್ ಪ್ರೆಸ್ ರೈಲಿನಲ್ಲಿ ಕಾರ್ಮಿಕರು ತಮ್ಮ ಊರುಗಳತ್ತ ಪ್ರಯಾಣ ಬೆಳೆಸಿದ್ದಾರೆ.
ಅದೇ ರೀತಿ ನಾಳೆ ಬೆಳಿಗ್ಗೆ 5 ಗಂಟೆಗೆ ಲಾಕ್ಡೌನ್ ಸಡಿಲಿಕೆಯಾಗುತ್ತಿದ್ದಂತೆ ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನಿಂದ ಸಾವಿರಾರು ಜನ ಮನೆ ಖಾಲಿ ಮಾಡಿಕೊಂಡು ತಮ್ಮ ಊರುಗಳಿಗೆ ತೆರಳಲು ಸಜ್ಜಾಗಿದ್ದಾರೆ. ಮಂಗಳವಾರ ರಾತ್ರಿಯಿಂದ 1 ವಾರ ಲಾಕ್ ಡೌನ್ ಆರಂಭವಾಗಲಿರುವ ಹಿನ್ನಲೆಯಲ್ಲಿ ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನಿಂದ ಅಪಾರ ಸಂಖ್ಯೆಯ ಜನ ಊರುಗಳಿಗೆ ತೆರಳಲಿದ್ದಾರೆ.
ಕೆಲವರಿಗೆ ವರ್ಕ್ ಫ್ರಮ್ ಹೋಮ್ ಗೆ ಅವಕಾಶ ಸಿಕ್ಕಿದೆ. ಹೆಚ್ಚಿನವರಿಗೆ ಕೆಲಸವಿಲ್ಲದಂತಾಗಿದೆ. ವ್ಯಾಪಾರ, ವಹಿವಾಟು, ಕೆಲಸವಿಲ್ಲದೇ, ಹೋಟೆಲ್, ಫ್ಯಾಕ್ಟರಿ ಸೇರಿ ಅನೇಕ ಉದ್ಯಮ ಬಂದ್ ಆಗಿವೆ. ಶಾಲೆಗಳಿಗೂ ರಜೆ ಇದೆ. ಲಾಕ್ ಡೌನ್ ವೇಳೆ ಕೆಲಸವಿಲ್ಲದೇ ಬೆಂಗಳೂರಲ್ಲಿ ಇರುವುದು ಕಷ್ಟಸಾಧ್ಯವಾದ ಹಿನ್ನಲೆಯಲ್ಲಿ ಸಾವಿರಾರು ಜನ ಊರಿಗೆ ಹೋಗಲು ಸಜ್ಜಾಗಿದ್ದಾರೆ.