ಹೊಸಕೋಟೆ ತಾಲೂಕಿನ ದೇವನಗುಂದಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕೊಳವೆ ಬಾವಿಗಳಲ್ಲಿ ಪೆಟ್ರೋಲ್ ಮಿಶ್ರಿತ ನೀರು ಬರುತ್ತಿದೆ.
ರೈತರು ನೀಡಿದ ಮಾಹಿತಿ ಮೇರೆಗೆ ತಹಶೀಲ್ದಾರ್ ಗೀತಾ ಅವರು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಂಸ್ಕರಣಾ ಘಟಕದ ಸುತ್ತಲಿನ ಸುಮಾರು 200 ಮೀಟರ್ ವ್ಯಾಪ್ತಿಯ ಕೊಳವೆ ಬಾವಿಗಳಲ್ಲಿ ಪೆಟ್ರೋಲ್ ಮಿಶ್ರಿತ ನೀರು ಕಂಡುಬರುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪೆಟ್ರೋಲ್ ಮಿಶ್ರಿತ ನೀರು ಪರೀಕ್ಷೆಗೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.
ಸಂಸ್ಕರಣಾ ಘಟಕದಿಂದ ಪೆಟ್ರೋಲ್ ಸೋರಿಕೆಯಾಗಿ ಅಂತರ್ಜಲ ಸೇರಿರುವ ಸಾಧ್ಯತೆ ಇದ್ದು, ವರದಿ ಬಳಿಕ ಕಾರಣ ಗೊತ್ತಾಗಲಿದೆ.