ಬೆಂಗಳೂರು: ದೂರವಾಣಿ ಕದ್ದಾಲಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ನೀಡಿದ್ದಾರೆ. ಫೋನ್ ಕದ್ದಾಲಿಕೆ ಅನುಮಾನ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಪತ್ರ ಬರೆದಿದ್ದಾರೆ.
ಡಿ.ಕೆ. ಶಿವಕುಮಾರ್ ಫೋನ್ ಕದ್ದಾಲಿಕೆ ಆರೋಪಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿರುಗೇಟು ನೀಡಿದ್ದಾರೆ.
ಡಿ.ಕೆ. ಶಿವಕುಮಾರ್ ಅವರೇ, ನೀವು ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದಾಗ ಧರ್ಮ, ಸಂಸ್ಕೃತಿಯ ಪ್ರತೀಕ, ಪವಿತ್ರವಾದ ಮನಸ್ಸುಳ್ಳ ಆದಿಚುಂಚನಗಿರಿ, ರಂಭಾಪುರಿ, ಸಿದ್ದಗಂಗಾ ಮಠ, ಸಿರಿಗೆರೆ ಮಠ, ಸುತ್ತೂರು ಶ್ರೀಗಳು ಸೇರಿದಂತೆ 7 ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಮಾಡಿದ್ದು ಅದು ನೆನಪಿದೆಯಾ ಎಂದು ಪ್ರಶ್ನಿಸಿದ್ದಾರೆ.
ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಕೇಸ್ ಇನ್ನೂ ಜೀವಂತವಾಗಿದೆ. ನಿಮ್ಮ ಫೋನ್ ಕದ್ದಾಲಿಕೆ ಮಾಡುವಂತಹ ದರಿದ್ರ ನಮ್ಮ ಸರ್ಕಾರಕ್ಕೆ ಬಂದಿಲ್ಲ. ನಿಮ್ಮ ಹೇಳಿಕೆ ಹಾಸ್ಯಾಸ್ಪದವಾಗಿದೆ. ಪ್ರತಿ ಮಾತಿನಲ್ಲಿಯೂ ಪ್ರಚಾರ ಬಯಸುತ್ತಿರಲಿಲ್ಲ, ಅಧಿಕಾರದಲ್ಲಿದ್ದಾಗ ಅನೇಕ ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿದ್ದೆವು ಎಂಬ ಎಂಬ ಸತ್ಯ ಹೇಳಿ ಬಿಡಿ ಎಂದು ಸುಧಾಕರ್ ತಿಳಿಸಿದ್ದಾರೆ.