alex Certify ಕೊರೋನಾ ಸೋಂಕಿತ ವೈದ್ಯಕೀಯ ವಿದ್ಯಾರ್ಥಿನಿ ಫೋಟೋ ಹರಿಬಿಟ್ಟ ಕಿಡಿಗೇಡಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಸೋಂಕಿತ ವೈದ್ಯಕೀಯ ವಿದ್ಯಾರ್ಥಿನಿ ಫೋಟೋ ಹರಿಬಿಟ್ಟ ಕಿಡಿಗೇಡಿಗಳು

ವಿಜಯಪುರ: ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬರಿಗೆ ಕೊರೋನಾ ಸೋಂಕು ತಗುಲಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಕೋರೋನಾ ಪಾಸಿಟಿವ್ ಬಂದಿರುವುದು ದೃಢಪಟ್ಟಿದ್ದು, ಆಕೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿನಿಗೆ ಕೊರೋನಾ ಸಂಕು ತಗುಲಿದ ಬಗ್ಗೆ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹರಿಬಿಟ್ಟಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಂತಹ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಅವರನ್ನು ಬಂಧಿಸಬೇಕೆಂದು ಒತ್ತಾಯ ಕೇಳಿಬಂದಿದೆ ಎಂದು ಹೇಳಲಾಗಿದೆ.

ವಿದ್ಯಾರ್ಥಿನಿಗೆ ಸೊಂಕು ತಗುಲಿದ್ದು ಹೇಗೆ ಎಂಬುದರ ಕುರಿತು ತನಿಖೆ ಕೈಗೊಳ್ಳಲಾಗಿದೆ. ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಏಪ್ರಿಲ್ 17 ರಂದು ವಿದ್ಯಾರ್ಥಿನಿ ಸ್ವತಃ ಕ್ವಾರಂಟೈನ್ ಗೆ ಒಳಗಾಗಿದ್ದು ಗುರುವಾರ ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...