ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿದೆ.
ಪ್ರಾಧಿಕಾರದ ಒಟ್ಟು 10.31 ಕೋಟಿ ರೂ. ಕ್ರಿಯಾಯೋಜನೆಗೆ ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ. ಜಿಲ್ಲಾವಾರು ಉಪಸಮಿತಿ ಹಾಗೂ ಕಾರ್ಯಕಾರಿ ಸಮಿತಿಗಳ ರಚನೆಗೂ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಪ್ರವಾಸೋದ್ಯಮ ಸಿ.ಟಿ. ರವಿ ಮೊದಲಾದವರು ಭಾಗಿಯಾಗಿದ್ದರು.