alex Certify ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಅನ್ನಭಾಗ್ಯ ಅಕ್ಕಿಯಲ್ಲಿ ಪ್ಲಾಸ್ಟಿಕ್ ರೈಸ್ ಪತ್ತೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಅನ್ನಭಾಗ್ಯ ಅಕ್ಕಿಯಲ್ಲಿ ಪ್ಲಾಸ್ಟಿಕ್ ರೈಸ್ ಪತ್ತೆ…?

 ಮಂಡ್ಯ: ಮಂಡ್ಯ ಜಿಲ್ಲೆಯ ಚಿಕ್ಕರಸಿನಕೆರೆ ಸೊಸೈಟಿಯಲ್ಲಿ ವಿತರಿಸಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ ಎನ್ನಲಾಗಿದೆ. ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ನೀಡಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣವಾಗಿದೆ ಎಂದು ಹೇಳಲಾಗಿದೆ.

ಚಿಕ್ಕರಸಿನಕೆರೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ವಿತರಿಸಲಾಗಿದೆ. ಗುರುದೇವರಹಳ್ಳಿ ಕಾಲೋನಿ ನಿವಾಸಿ ಪುಟ್ಟೇಗೌಡ, ಸತ್ಯಮ್ಮ, ಮಧು ಮೊದಲಾದವರಿಗೆ ಅಕ್ಕಿ ವಿತರಿಸಿದ್ದು ಪ್ಲಾಸ್ಟಿಕ್ ನಂತಹ ಅಕ್ಕಿ ಕಾಳು ಕಂಡು ಬಂದಿವೆ.

ಗ್ರಾಮಸ್ಥರು ಆಹಾರ ಇಲಾಖೆ ಅಧಿಕಾರಿಗಳಿಗೆ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಧಿಕಾರಿ ಪರಿಶೀಲನೆ ನಡೆಸಿ ಅಕ್ಕಿಯ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದ್ದಾರೆ ಎನ್ನಲಾಗಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...