
ನವದೆಹಲಿ: ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇವತ್ತು ಬೆಳಿಗ್ಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.
ಪ್ರಧಾನಿಯವರ ನಿವಾಸದಲ್ಲಿ ಸಿಎಂ ಭೇಟಿಗೆ ಸಮಯ ನಿಗದಿಯಾಗಿದೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಭಾರಿ ಹಾನಿಯಾಗಿದ್ದು, ಹೆಚ್ಚಿನ ಪರಿಹಾರ ಬಿಡುಗಡೆಗೆ ಬೇಡಿಕೆ ಇಡಲಿದ್ದಾರೆ.
ನಿನ್ನೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿದ್ದ ಯಡಿಯೂರಪ್ಪ ಇಂದು ಬೆಳಗ್ಗೆ ಪ್ರಧಾನಿಯವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ.
ಪಕ್ಷ ಮತ್ತು ಸರ್ಕಾರ ಮೊದಲಾದ ವಿಚಾರಗಳ ಬಗ್ಗೆ ಪ್ರಧಾನಿಯವರೊಂದಿಗೆ ಸಮಾಲೋಚನೆ ನಡೆಸಲಿದ್ದು, ಸಂಪುಟ ವಿಸ್ತರಣೆ, ಸಚಿವರ ಪಟ್ಟಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅನುಮತಿ ಪಡೆಯಲಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಪ್ರಧಾನಿಯವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.