
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪಾಂಡವಪುರಕಲ್ಲು ನಿವಾಸಿಯಾಗಿರುವ ಹೈದರ್ ಲೈಂಗಿಕ ಕಿರುಕುಳ ನೀಡಿದ ಆರೋಪಿಯಾಗಿದ್ದಾನೆ. ಕಜೆಕಾರು ಗ್ರಾಮದಲ್ಲಿ ಮೇ 30ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಸಂಜೆಯ ವೇಳೆಯಲ್ಲಿ ಬಾಲಕಿಯ ಮನೆಗೆ ನೀರು ತರಲು ಹೋಗಿದ್ದ ಆರೋಪಿ ಹಣ ಕೊಡಲು ಮುಂದಾಗಿ ಬಾಲಕಿ ಕೈಹಿಡಿದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಕಿರುಚಾಡಿದಾಗ ಬೆದರಿಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪುಂಜಾಲಕಟ್ಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.