ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಕೊರೋನಾ ಸೋಂಕಿನಿಂದ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದು, 14 ಮಂದಿ ಪೊಲೀಸರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ವಿಲ್ಸನ್ ಗಾರ್ಡನ್ ಟ್ರಾಫಿಕ್ ಠಾಣೆಯ ಎಎಸ್ಐ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆನ್ನಲಾಗಿದೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯ 14 ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಹೇಳಲಾಗಿದೆ.
ನಿನ್ನೆಯವರೆಗೆ 9 ಮಂದಿಗೆ ಸೋಂಕು ತಗಲಿದ್ದು ಇಂದು ಮತ್ತೆ 14 ಮಂದಿಗೆ ಸೋಂಕು ತಗುಲಿದೆ. ರಾಜ್ಯಾದ್ಯಂತ ಇದುವರೆಗೆ 124 ಪೊಲೀಸರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಆತಂಕ ಹೆಚ್ಚಾಗಿದೆ.