ಕಲಬುರ್ಗಿ ನಗರದಲ್ಲಿ ಸಂಡೇ ಲಾಕ್ ಡೌನ್ ಪರಿಣಾಮಕಾರಿ ಜಾರಿಗೆ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದ್ದು ನಗರದ ರಸ್ತೆಗಳಲ್ಲಿ ಪೊಲೀಸರು ರೌಂಡ್ಸ್ ಹಾಕಿದ್ದಾರೆ. ವಾಹನಗಳ ತಪಾಸಣೆ ಮಾಡಿದ್ದಾರೆ.
ಲಾಕ್ಡೌನ್ ಜಾರಿಯಲ್ಲಿದ್ದರೂ ನಿರ್ಲಕ್ಷ್ಯ ತೋರಿದ ಅನೇಕರು ರಸ್ತೆಗಳಲ್ಲಿ ಅನಗತ್ಯವಾಗಿ ತಿರುಗುತ್ತಿರುವುದನ್ನು ಗಮನಿಸಿದ ಪೊಲೀಸರು ಲಾಠಿ ಬೀಸಿದ್ದಾರೆ. ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬೇಕಾಬಿಟ್ಟಿಯಾಗಿ ಓಡಾಡುವ ಜನರಿಗೆ ಬಿಸಿ ಮುಟ್ಟಿಸಿ ಮನೆಗೆ ಕಳಿಸಿದ್ದಾರೆ. ಅದೇ ರೀತಿ ಚಿತ್ರದುರ್ಗದ ಹೊಳಲ್ಕೆರೆ ರಸ್ತೆಯಲ್ಲಿ ಕೂಡ ಅನಗತ್ಯವಾಗಿ ತಿರುಗಾಡುತ್ತಿದ್ದ ಅವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.
ಹಾವೇರಿಯಲ್ಲಿ ನಿಯಮ ಉಲ್ಲಂಘಿಸಿ ಓಡಾಡುತ್ತಿದ್ದ ವಾಹನ ಸವಾರರಿಗೆ ಪೊಲೀಸರು ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.