ಕೊಪ್ಪಳ: ಬ್ಯಾಂಕ್ ಮ್ಯಾನೇಜರ್ ಮತ್ತು ಅವರ ಪತ್ನಿ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ತ್ರಿವೇಣಿಯವರ ಸಹೋದರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅವಿನಾಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ಕ ಪ್ರೀತಿಸಿ ಮದುವೆಯಾಗಿದ್ದ ಹಿನ್ನೆಲೆಯಲ್ಲಿ ತಮ್ಮ ಹತ್ಯೆ ಮಾಡಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗಿದೆ. ಕಾರಟಗಿಯ IDFC ಬ್ಯಾಂಕ್ ಶಾಖೆಯಲ್ಲಿ ನಿನ್ನೆ ಘಟನೆ ನಡೆದಿತ್ತು.
ಕೊಪ್ಪಳ ಜಿಲ್ಲೆ ಕಾರಟಗಿ ಪಟ್ಟಣದಲ್ಲಿರುವ ಬ್ಯಾಂಕ್ ಶಾಖೆ ಕಚೇರಿಯಲ್ಲಿ ಹಲ್ಲೆಗೊಳಗಾಗಿದ್ದ ಮ್ಯಾನೇಜರ್ ಪತ್ನಿ ತ್ರಿವೇಣಿ ಸಾವನ್ನಪ್ಪಿದ್ದರು. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿನೋದ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರು ತಿಂಗಳ ಹಿಂದೆ ತ್ರಿವೇಣಿ ಮತ್ತು ವಿನೋದ್ ಪ್ರೀತಿಸಿ ಮದುವೆಯಾಗಿದ್ದರು. ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.