alex Certify ಲಾಕ್ ಡೌನ್ ಉಲ್ಲಂಘಿಸಿದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು, ಅನಗತ್ಯವಾಗಿ ರಸ್ತೆಗೆ ಬಂದವರ ಬೈಕ್ ಸೀಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ಉಲ್ಲಂಘಿಸಿದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು, ಅನಗತ್ಯವಾಗಿ ರಸ್ತೆಗೆ ಬಂದವರ ಬೈಕ್ ಸೀಜ್

ರಾಯಚೂರು: ಭಾನುವಾರ ಕಂಪ್ಲೀಟ್ ಲಾಕ್ಡೌನ್ ಘೋಷಣೆ ಮಾಡಿದ್ದರೂ, ಅನಗತ್ಯವಾಗಿ ಜನ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಕಂಪ್ಲೀಟ್ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತು ಮತ್ತು ಸೇವೆಗಳನ್ನು ಹೊರತುಪಡಿಸಿ ಅನಗತ್ಯವಾಗಿ ತಿರುಗಾಡದಂತೆ ಮೊದಲೇ ಸೂಚನೆ ನೀಡಿದ್ದರೂ ಕೂಡ ಜನ ಅನಗತ್ಯವಾಗಿ ತಿರುಗಾಡುತ್ತಿದ್ದಾರೆ.

ಹೀಗೆ ಬೇಕಾಬಿಟ್ಟಿಯಾಗಿ ಜನ ಮತ್ತು ವಾಹನ ಸಂಚಾರ ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಅನಗತ್ಯವಾಗಿ ರಸ್ತೆಗೆ ಇಳಿದವರು, ಮಾಸ್ಕ್ ಹಾಕದವರು, ಡಬಲ್, ತ್ರಿಬಲ್ ರೈಡಿಂಗ್ ಮಾಡುತ್ತಿದ್ದವರಿಗೆ ಬಿಸಿ ಮುಟ್ಟಿಸಿದ್ದು, ದ್ವಿಚಕ್ರವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...