
ಬೆಂಗಳೂರು: ಪೊಲೀಸ್ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಪ್ರಕ್ರಿಯೆ ಮುಗಿದ ನಂತರ ಅಂತಿಮ ಅಧಿಸೂಚನೆ ಪ್ರಕಟವಾಗಲಿದೆ ಎಂದು ಹೇಳಲಾಗಿದೆ
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ನಿಯಮಗಳು 1978, ಕರ್ನಾಟಕ ರಾಜ್ಯ ಪೊಲೀಸ್ ಮಿನಿಸ್ಟೀರಿಯಲ್ ಸರ್ವಿಸಸ್ ನೇಮಕಾತಿ ತಿದ್ದುಪಡಿ ನಿಯಮಗಳು 2020 ರ ಅಡಿಯಲ್ಲಿ ರಾಜ್ಯದಲ್ಲಿ 36,261 ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ನಡೆಯಲಿದೆ.
ಪೊಲೀಸ್ ಹುದ್ದೆಗಳಿಗೆ ಆಯ್ಕೆಯಾದವರಿಗೆ 23,500 ರೂಪಾಯಿಯಿಂದ 47,650 ರೂಪಾಯಿಯವರೆಗೆ ಸಂಬಳ ನಿಗದಿ ಮಾಡಲಾಗಿದೆ. ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಗೃಹ ಇಲಾಖೆ, ವಿಧಾನಸೌಧ, ಬೆಂಗಳೂರು – 1. ಇಲ್ಲಿಗೆ ಅಧಿಸೂಚನೆ ಪ್ರಕಟವಾದ 15 ದಿನದೊಳಗೆ ಆಕ್ಷೇಪಣೆ ಸಲ್ಲಿಕೆ ಮಾಡಬಹುದೆಂದು ಹೇಳಲಾಗಿದೆ.