alex Certify ಪ್ರಧಾನ ಮಂತ್ರಿ ‘ಉಜ್ವಲಾ’ ಯೋಜನೆ: ಮಹಿಳೆಯರು ಮನೆಯಲ್ಲೇ ಕುಳಿತು ಮಾಡಿ ಈ ಕೆಲಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನ ಮಂತ್ರಿ ‘ಉಜ್ವಲಾ’ ಯೋಜನೆ: ಮಹಿಳೆಯರು ಮನೆಯಲ್ಲೇ ಕುಳಿತು ಮಾಡಿ ಈ ಕೆಲಸ

ವಿಶೇಷವಾಗಿ ಮಹಿಳೆಯರಿಗಾಗಿ ಶುರು ಮಾಡಿರುವ ಯೋಜನೆ ಪ್ರಧಾನ ಮಂತ್ರಿ ಉಜ್ವಲಾ ಯೋಜನೆ. ಈ ಯೋಜನೆ ಇನ್ನಷ್ಟು ಫಲಾನುಭವಿಗಳನ್ನು ತಲುಪಲಿ ಎನ್ನುವ ಕಾರಣಕ್ಕೆ ಈ ಯೋಜನೆಯನ್ನು ಸರ್ಕಾರ ವಿಸ್ತರಿಸಿದೆ. ಮನೆಯಲ್ಲಿ ಕುಳಿತು ಈ ಯೋಜನೆಗೆ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ಬಿಪಿಎಲ್ ಕಾರ್ಡ್ ದಾರರ ಕುಟುಂಬಗಳು ಮಾತ್ರ ಈ ಯೋಜನೆ ಲಾಭ ಪಡೆಯಬಹುದು. ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯ ಲಾಭ ಪಡೆಯಲು ಬಯಸಿದರೆ  ಉಜ್ವಲಾ ಸಿಲಿಂಡರ್ ಸಂಪರ್ಕಕ್ಕಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಯಾವುದೇ ಮಹಿಳೆ ಇದಕ್ಕೆ ಅರ್ಜಿ ಸಲ್ಲಿಸಬಹುದು.

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವವರು pmujjwalayojana.com ವೆಬ್‌ಸೈಟ್‌ಗೆ ಹೋಗಬೇಕು. ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ನಂತ್ರ ಮಾಹಿತಿಯನ್ನು ಭರ್ತಿ ಮಾಡಬೇಕು. ನಂತ್ರ ಅದ್ರ ಪ್ರಿಂಟ್ ತೆಗೆದು ಎಲ್‌ಪಿಜಿ ವಿತರಕರಿಗೆ ನೀಡಬೇಕು. ಅರ್ಜಿ ಜೊತೆ ಸಂಬಂಧಿಸಿದ ದಾಖಲೆಗಳನ್ನು ನೀಡಬೇಕು. ದಾಖಲೆಗಳನ್ನು ಪರಿಶೀಲಿಸಿ ನಂತ್ರ ಎಲ್ಪಿಜಿ ಸಂಪರ್ಕ ನೀಡಲಾಗುತ್ತದೆ.

ಉಜ್ವಲಾ ಯೋಜನೆಗೆ ಅರ್ಜಿ ಸಲ್ಲಿಸುವಾಗ, ಮೊಬೈಲ್ ಸಂಖ್ಯೆ, ಜನನ ಪ್ರಮಾಣಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿಯ ಫೋಟೋ ಪ್ರತಿ, ಬಿಪಿಎಲ್ ಕಾರ್ಡ್, ಪಾಸ್‌ಪೋರ್ಟ್ ಗಾತ್ರದ ಫೋಟೋ, ಬ್ಯಾಂಕ್ ಖಾತೆಯ ಫೋಟೋ ಪ್ರತಿಯನ್ನು ಸಲ್ಲಿಸಬೇಕು. ಈ ಯೋಜನೆಗೆ ಬಿಪಿಎಲ್ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿದಾರರ ವಯಸ್ಸು 18 ವರ್ಷಕ್ಕಿಂತ ಹೆಚ್ಚಿರಬೇಕು.

ಈ ಯೋಜನೆಯ ಪ್ರಕಾರ, ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಯಾವುದೇ ಎಲ್‌ಪಿಜಿ ಸಂಪರ್ಕ ಇರಬಾರದು. ಸರ್ಕಾರದ ಪ್ರಕಾರ, ಎಲ್‌ಪಿಜಿ ಸಂಪರ್ಕವಿಲ್ಲದ ಮನೆಗಳ ಸಂಖ್ಯೆ ಒಂದು ಕೋಟಿಗೂ ಹೆಚ್ಚಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...