alex Certify ಅಪರೂಪದ ಘಟನೆ: ಅವಳಿ ಮಕ್ಕಳಿಗೆ ಜನ್ಮ ನೀಡಿದ 53 ವರ್ಷದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪರೂಪದ ಘಟನೆ: ಅವಳಿ ಮಕ್ಕಳಿಗೆ ಜನ್ಮ ನೀಡಿದ 53 ವರ್ಷದ ಮಹಿಳೆ

ತುಮಕೂರು: ತುಮಕೂರು ಜಿಲ್ಲೆಯ ಶಿರಾದಲ್ಲಿ 53 ವರ್ಷದ ಮಹಿಳೆಯೊಬ್ಬರು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ.

ಕೃಷಿಕ ಕುಟುಂಬದವರಾಗಿರುವ ದಂಪತಿಗೆ 11 ವರ್ಷದ ಮಗನಿದ್ದು, ದಂಪತಿ ಮತ್ತೊಂದು ಮಗುವಿನ ಪ್ರಯತ್ನದಲ್ಲಿದ್ದರು. ಗರ್ಭಿಣಿಯಾಗಿದ್ದ ಮಹಿಳೆಗೆ ಸೋಮವಾರ ಸಿಸೇರಿಯನ್ ಮೂಲಕ ಹೆರಿಗೆಯಾಗಿದ್ದು ಅವಳಿ ಗಂಡು ಮಕ್ಕಳು ಜನಿಸಿವೆ. ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ.

ಆಧುನಿಕ ಜೀವನ ಶೈಲಿಯಿಂದಾಗಿ ವಯಸ್ಸು ಮೀರಿದ ನಂತರ ಮಕ್ಕಳು ಆಗುವ ಸಾಧ್ಯತೆ ಕಡಿಮೆಯಾಗಿದೆ. 53 ವರ್ಷದ ಮಹಿಳೆ ಜನ್ಮ ನೀಡಿರುವುದು ಅಪರೂಪದ ಪ್ರಕರಣವಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...