alex Certify ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ವಿಜಯಪುರ: ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೀಲ್ ಡೌನ್ ಆಗಿದ್ದರಿಂದ ಆಂಬುಲೆನ್ಸ್ ನಲ್ಲಿಯೇ ಮಹಿಳೆ ಮಗುವಿಗೆ ಜನ್ಮ ನೀಡಿದ ಘಟನೆ ವಿಜಯಪುರ ಜಿಲ್ಲೆಯ ನಿಡುಗುಂದಿ ತಾಲೂಕಿನ ಬೇನಾಳ ಆರ್.ಎಸ್. ಗ್ರಾಮದಲ್ಲಿ ನಡೆದಿದೆ.

ಸವಿತಾ ರಮೇಶ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ತುಂಬು ಗರ್ಭಿಣಿಯಾಗಿದ್ದ ಸವಿತಾಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ನಿಡಗುಂದಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ.

ಆದರೆ, ಕೊರೋನಾ ಸೋಂಕು ಕಾರಣಕ್ಕೆ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದ್ದು ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲಿಯೇ ಹೆರಿಗೆಯಾಗಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...