alex Certify ರಾತ್ರಿ ಕಡೂರಿನಲ್ಲಿ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ಕಡೂರಿನಲ್ಲಿ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

ಬಾಣೂರು ಗ್ರಾಮದಲ್ಲಿ ಆಸ್ತಿ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಗುಂಡಿನ ದಾಳಿ ನಡೆಸಿದ್ದು, ಕಲ್ಯಾಣ್ ಕುಮಾರ್ ಮತ್ತು ಉಪನ್ಯಾಸಕ ಸುಮಂತ್ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಬೆಂಗಳೂರಿಂದ ಬಂದಿದ್ದ ಇಬ್ಬರು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಬಾಣೂರು ಗ್ರಾಮದಲ್ಲಿ ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಆಸ್ತಿ ಖರೀದಿ ಮಾತುಕತೆಗೆ ಬಂದಿದ್ದು, ಈ ಸಂದರ್ಭದಲ್ಲಿ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿ ಕಲ್ಯಾಣ್ ಕುಮಾರ್ ಮತ್ತು ಉಪನ್ಯಾಸ ಸುಮಂತ್ ಅವರ ಮೇಲೆ ಫೈರಿಂಗ್ ಮಾಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...