ಬಾಗಲಕೋಟೆ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ತಾಯಿ, ಮಗನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಂಗವಾಡ ಗ್ರಾಮದಲ್ಲಿ ನಡೆದಿದೆ.
ದೇವಕೆವ್ವ(56), ದುರ್ಗಪ್ಪ ಭೀಮಪ್ಪ ಮಾದರ(36) ಮೃತಪಟ್ಟವರು ಎಂದು ಹೇಳಲಾಗಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಜಂಗವಾಡ ಗ್ರಾಮದಲ್ಲಿ ಘಟನೆ ನಡೆದಿದೆ.
ಶಿವಪ್ಪ, ಉಮೇಶ್, ಕಾಮಪ್ಪ, ಹನುಮಂತ, ಪ್ರಕಾಶ್, ರವಿ, ರಮೇಶ್, ಬಸವರಾಜ ಸೇರಿ 9 ಜನರಿಂದ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ. ಕೆರೂರು ಪೊಲೀಸ್ ಠಾಣೆಯಲ್ಲಿ 14 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.