ಬೆಂಗಳೂರು: ಆಸ್ತಿ ನೋಂದಣಿಗೆ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಸರದಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಮತ್ತು ನೋಂದಣಿ ಪ್ರಕ್ರಿಯೆ ಸರಳಗೊಳಿಸುವ ಉದ್ದೇಶದಿಂದ ಸರ್ಕಾರ ಆಸ್ತಿ ನೊಂದಣಿಯನ್ನು ಸಂಪೂರ್ಣವಾಗಿ ಆನ್ಲೈನ್ ಮಾಡಲು ಮುಂದಾಗಿದೆ.
3 ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಆನ್ಲೈನ್ ನೋಂದಣಿ ಕಾರ್ಯ ನವೆಂಬರ್ 2 ರಿಂದ ಆರಂಭವಾಗಲಿದೆ. ಈಗಾಗಲೇ ಪ್ರಾಯೋಗಿಕವಾಗಿ 3 ಕಚೇರಿಗಳಲ್ಲಿ ಯೋಜನೆ ಜಾರಿಗೆ ಕ್ರಮ ಕೈಗೊಂಡಿದ್ದು ನಂತರದಲ್ಲಿ ರಾಜ್ಯಾದ್ಯಂತ ವಿಸ್ತರಿಸಲು ಯೋಜಿಸಲಾಗಿದೆ.
ನವೆಂಬರ್ 2 ರಿಂದ ರಾಜ್ಯದ ಮೂರು ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಆನ್ಲೈನ್ ಮೂಲಕ ಆಸ್ತಿ ನೋಂದಣಿ ಮಾಡಲು ಆದೇಶ ಹೊರಡಿಸಲಾಗಿದೆ. ಈ ಮೂರು ಕಚೇರಿಗಳಲ್ಲಿ ಯೋಜನೆ ಯಶಸ್ವಿಯಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಯೋಜನೆ ವಿಸ್ತರಿಸಲು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಮುಂದಾಗಿದೆ. ಈ ಹಿಂದೆಯೇ ಆನ್ಲೈನ್ ನಲ್ಲಿ ಆಸ್ತಿ ನೋಂದಣಿಗೆ ಕ್ರಮ ಕೈಗೊಂಡಿದ್ದರೂ ತಾಂತ್ರಿಕ ದೋಷ ಸೇರಿದಂತೆ ಅನೇಕ ಕಾರಣಗಳಿಂದ ಆನ್ಲೈನ್ ನಲ್ಲಿ ಆಸ್ತಿ ನೋಂದಣಿ ಮಾಡಿರಲಿಲ್ಲ.
ಈಗ ಮತ್ತೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗಿದೆ. ಆಸ್ತಿ ನೋಂದಣಿಗೆ ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ ನೋಂದಣಿ, ಮುದ್ರಾಂಕ ಶುಲ್ಕ ಆನ್ಲೈನ್ ನಲ್ಲಿ ಪಾವತಿಸಬೇಕು. ನಂತರದಲ್ಲಿ ನೀಡುವ ಸಮಯದಲ್ಲಿ ಆಸ್ತಿ ನೋಂದಣಿ ಮಾಡಿಸಬೇಕು ಎಂದು ಹೇಳಲಾಗಿದೆ.