
ಬೆಂಗಳೂರಿನ ಸದಾಶಿವನಗರದಲ್ಲಿ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರು ಮಂದಿಯನ್ನು ಬಂಧಿಸಿದ್ದಾರೆ.
ಐವರು ಯುವತಿಯರು ಮತ್ತು ಮಸಾಜ್ ಪಾರ್ಲರ್ ಮಾಲೀಕನನ್ನು ಬಂಧಿಸಲಾಗಿದೆ. ಕೊರೋನಾ ಲಾಕ್ ಡೌನ್ ಕಾರಣದಿಂದ ಸ್ಪಾಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿಲ್ಲವಾದರೂ ಮಸಾಜ್ ಪಾರ್ಲರ್ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದ್ದು ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.