alex Certify ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಭಿನ್ನ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಭಿನ್ನ ಪ್ರತಿಭಟನೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಸರ್ಕಾರ ಕುರುಡಾಗಿದೆ, ದಾರಿ ತೋರಿಸಿ ಎಂದು ಹೇಳಿದ ಅವರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸರ್ಕಾರದ ಆಡಳಿತ ವೈಖರಿಗೆ ವ್ಯಂಗ್ಯವಾಡಿದ್ದಾರೆ.

ಬಟ್ಟೆಯಿಂದ ಕಣ್ಣು, ಕಿವಿ, ಬಾಯಿ ಮುಚ್ಚಿಕೊಂಡು ಪ್ರತಿಭಟನೆ ನಡೆಸಿದ್ದು, ಬಿಜೆಪಿ ಸರ್ಕಾರ ಕುರುಡಾಗಿದೆ. ಎಂದು ಟೀಕಿಸಿದ್ದಾರೆ.

ಗರ್ಭಿಣಿಯರು, ಬಾಣಂತಿಯರು, ಮಕ್ಕಳಿಗೆ ನೀಡಬೇಕಾದ ಆಹಾರ ಪದಾರ್ಥಗಳನ್ನು ಬಿಜೆಪಿ ಸರ್ಕಾರ, ಪಕ್ಷದ ನಾಯಕರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ವತಿಯಿಂದ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಡಿ.ಕೆ. ಶಿವಕುಮಾರ್ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸರ್ಕಾರದ ಆಡಳಿತ ವೈಖರಿಯನ್ನು ಟೀಕಿಸಿದ್ದಾರೆ.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು, ಮಹಿಳಾ ನಾಯಕಿಯರು ಭಾಗವಹಿಸಿದ್ದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...