
ಬೆಂಗಳೂರು: ನೇಮಕಾತಿ ಆದೇಶ ಪತ್ರಕ್ಕಾಗಿ ಹೋರಾಟ ಕೈಗೊಂಡಿರುವ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಸಿಎಂ ಅಭಯ ನೀಡಿದ್ದಾರೆ.
ಪದವಿ ಪೂರ್ವ ಕಾಲೇಜು ಬೋಧಕರ ಆಯ್ಕೆ ಬಗ್ಗೆ ಈಗಾಗಲೇ ನೇಮಕಾತಿ ಪ್ರಕ್ರಿಯೆ ಮತ್ತು ಕೌನ್ಸೆಲಿಂಗ್ ನಡೆದು ಸ್ಥಳ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೋವಿಡ್-19 ಪರಿಸ್ಥಿತಿ ಹಿನ್ನೆಲೆಯಲ್ಲಿ ಇನ್ನು ಕಾಲೇಜುಗಳು ಆರಂಭವಾಗದೆ ಇರುವುದರಿಂದ ಬೋಧಕರಿಗೆ ವರದಿ ಮಾಡಿಕೊಳ್ಳಲು ತೊಂದರೆ ಆಗುತ್ತಿರುವುದು ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಬೋಧಕರಿಗೆ ಅನುಕೂಲವಾಗುವಂತೆ ಈ ಹಿಂದೆ ಇದ್ದ ಒಂದು ವರ್ಷದೊಳಗೆ ನೇಮಕಾತಿ ಅವಧಿಯನ್ನು ನೇಮಕಾತಿ ಆಗುವವರೆಗೆ ಮುಂದುವರೆಸಲಾಗುವುದು. ಆದ್ದರಿಂದ ಬೋಧಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದ್ದಾರೆ.
ನೇಮಕಾತಿ ಆದೇಶ ಪತ್ರ ನೀಡಬೇಕೆಂದು ಆಯ್ಕೆಯಾದ ಪಿಯು ಉಪನ್ಯಾಸಕರು ನಿರಂತರ ಹೋರಾಟ ಕೈಗೊಂಡಿದ್ದಾರೆ. ಅವರಿಗೆ ಸಿಎಂ ಭರವಸೆ ನೀಡಿದ್ದಾರೆ.