ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ವಯೋಮಿತಿ ಹೆಚ್ಚಳ ಮಾಡಲಾಗಿದ್ದು ಇದರ ಬೆನ್ನಲ್ಲೇ ಅರ್ಜಿ ಸಲ್ಲಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
2020 -21 ನೇ ಸಾಲಿನ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆ ನೇಮಕಾತಿ ಅರ್ಜಿ ಆಹ್ವಾನ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನೇಮಕಾತಿ ವಿಭಾಗದ ಎಡಿಜಿಪಿ ರಾಜ್ಯದ ಎಲ್ಲಾ ಆಯುಕ್ತರು ಮತ್ತು ಪೊಲೀಸ್ ಅಧೀಕ್ಷಕರಿಗೆ ಸಂದೇಶ ರವಾನಿಸಿದ್ದಾರೆ.
ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಜೂನ್ 1 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಆದರೆ ತಾತ್ಕಾಲಿಕವಾಗಿ ಅರ್ಜಿ ಸಲ್ಲಿಕೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ.