ಬೆಂಗಳೂರು: ಕೊರೋನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಇಂದು ಯಶಸ್ವಿಯಾಗಿ ನಡೆದಿದೆ.
5,95,997 ವಿದ್ಯಾರ್ಥಿಗಳ ಪೈಕಿ 27,022 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, 5,68,975 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗುವುದು.
ಕೊರೋನಾಗೆ ವಿದ್ಯಾರ್ಥಿಗಳು ಭಯಪಟ್ಟುಕೊಂಡಿದ್ದಾರೆ. ಅಲ್ಲದೆ ಪೋಷಕರು ಕೂಡ ಮಕ್ಕಳನ್ನು ಪರೀಕ್ಷೆಗೆ ಕಳುಹಿಸಲು ಹಿಂದೇಟು ಹಾಕಿದ್ದಾರೆ. ಇದರಿಂದಾಗಿ 27,022 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎನ್ನಲಾಗಿದೆ.