alex Certify ಸೆಕೆಂಡ್ ಪಿಯುಸಿ ಇಂಗ್ಲಿಷ್ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಕೆಂಡ್ ಪಿಯುಸಿ ಇಂಗ್ಲಿಷ್ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಜೂನ್ 18 ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯ ನಿಗದಿಯಾಗಿದ್ದು ವಿದ್ಯಾರ್ಥಿಗಳು ಇರುವ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಪದವಿಪೂರ್ವ ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ.

ಹಾಸ್ಟೆಲ್ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರ ಮಕ್ಕಳು ತಾವಿರುವ ಜಿಲ್ಲೆಗಳಲ್ಲಿ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಬರೆಯಲು ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗುವುದು. 3 ರಿಂದ 5ರವರೆಗೆ ಸಂಬಂಧಿಸಿದ ಕಾಲೇಜುಗಳ ಪ್ರಾಚಾರ್ಯರ ಮೂಲಕ ತಿದ್ದುಪಡಿಗೆ ಅವಕಾಶವಿದ್ದು ಪರೀಕ್ಷಾ ಕೇಂದ್ರಗಳನ್ನು ಹಂಚಿಕೆ ಮಾಡಿದ ಅಂತಿಮ ಪಟ್ಟಿಯನ್ನು ಜೂನ್ 7 ರಂದು ಪ್ರಕಟಿಸಲಾಗುವುದು.

ಜೂನ್ 3 ರಂದು ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಿದ್ದು ವಿದ್ಯಾರ್ಥಿಗಳು ತಮ್ಮ ಹೆಸರು ಇರುವ ಪುಟದ ಪ್ರಿಂಟ್ ತೆಗೆದುಕೊಂಡು ಹಂಚಿಕೆಯಾದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ. ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ರಾಜ್ಯದ ಜಿಲ್ಲೆಯ ತಾತ್ಕಾಲಿಕ ಪಟ್ಟಿಯನ್ನು ಜೂನ್ 5ರಂದು ಪ್ರಕಟಿಸಿ ಜುಲೈ 7 ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...