alex Certify ಸೆಕೆಂಡ್ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಕೆಂಡ್ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ಬಾಕಿ ಉಳಿದಿರುವ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಜೂನ್ ತಿಂಗಳಲ್ಲಿ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ.

ಲಾಕ್ ಡೌನ್ ಜಾರಿಯಾದ ನಂತರ ವಿದ್ಯಾರ್ಥಿಗಳು ಯಾವ ಜಿಲ್ಲೆಗಳಲ್ಲಿ ಇದ್ದಾರೆಯೋ ಅಲ್ಲಿಯೇ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವ ಆತಂಕದಲ್ಲಿದ್ದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ವಿದ್ಯಾರ್ಥಿಗಳು ತಾವು ಇರುವ ಸ್ಥಳದಲ್ಲೇ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ವಿದ್ಯಾರ್ಥಿಗಳು ಸದ್ಯ ಇರುವ ಸ್ಥಳದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ತಾವು ಇರುವ ಜಿಲ್ಲೆಯಲ್ಲಿಯೇ ಪರೀಕ್ಷೆ ಬರೆಯಲು ಇಚ್ಚಿಸುವ ವಿದ್ಯಾರ್ಥಿಗಳು ತಮ್ಮ ಮಾಹಿತಿಯನ್ನು ಇಮೇಲ್ ವಿಳಾಸಕ್ಕೆ ಕಳುಹಿಸಲು ತಿಳಿಸಲಾಗಿದೆ.

ಕಾಲೇಜಿನ ಸಂಕೇತ ಸಂಖ್ಯೆ, ವಿದ್ಯಾರ್ಥಿಯ ಹೆಸರು, ಸ್ಟೂಡೆಂಟ್ ನಂಬರ್, ದ್ವಿತೀಯ ಪಿಯುಸಿ ರಿಜಿಸ್ಟರ್ ನಂಬರ್, ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ, ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಹೆಸರು, ಪರೀಕ್ಷೆ ಬರೆದ ಪರೀಕ್ಷಾ ಕೇಂದ್ರದ ಸಂಕೇತ, ಈಗಾಗಲೇ ಬರೆದ ಪರೀಕ್ಷಾ ಕೇಂದ್ರ ಹೊರತುಪಡಿಸಿ ಪ್ರಸ್ತುತ ವಾಸವಿರುವ ಜಿಲ್ಲೆಯಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಇಚ್ಚಿಸಿದಲ್ಲಿ ವಿವರ ನೀಡುವುದು.

ಇವೆಲ್ಲ ಮಾಹಿತಿಗಳನ್ನು ಇ -ಮೇಲ್ ddtt.pue@gmail.com ಇಲ್ಲಿಗೆ ಖುದ್ದಾಗಿ ತಲುಪಿಸುವುದು. ಯಾವುದೇ ಕಾರಣಕ್ಕೂ ವಾಟ್ಸಾಪ್ ನಲ್ಲಿ ಕಳುಹಿಸಬಾರದು. ವಿದ್ಯಾರ್ಥಿಗಳು ಇಲ್ಲದಿದ್ದರೆ ನಿಲ್ ರಿಪೋರ್ಟ್ ಕಳಿಸುವುದು. ಇದು ಪರೀಕ್ಷೆ ಗೌಪ್ಯ ವಿಷಯವಾಗಿರುವುದರಿಂದ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರದ ವಿವರಗಳನ್ನು ವಾಟ್ಸಾಪ್ ನಲ್ಲಿ ಶೇರ್ ಮಾಡಬಾರದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...