ಬೆಂಗಳೂರು: ಕೊರೋನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ಸೆಕೆಂಡ್ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆ ಜೂನ್ 18 ರಂದು ಗುರುವಾರ ರಾಜ್ಯಾದ್ಯಂತ ನಡೆಯಲಿದೆ.
ಬೆಳಗ್ಗೆ 10.15 ಕ್ಕೆ ಪರೀಕ್ಷೆ ಆರಂಭವಾಗಲಿದ್ದು ಎಲ್ಲಾ ವಿದ್ಯಾರ್ಥಿಗಳಿಗೂ ಬೇಗನೇ ಪರೀಕ್ಷಾ ಕೇಂದ್ರಕ್ಕೆ ಆಗಮಿಸಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಲೋಪವಾಗದಂತೆ ಪರೀಕ್ಷೆ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.
ಸ್ವಂತ ಜಿಲ್ಲೆಗಳ ವ್ಯಾಪ್ತಿಯಲ್ಲಿ 18524 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಹೋಗಿ ಬರಲು ಉಚಿತ ಪ್ರಯಾಣಕ್ಕೆ ಬಸ್ ವ್ಯವಸ್ಥೆ ಮಾಡಲಾಗಿದೆ.