alex Certify ಮೇ 5 ರಂದು PUC ಫಲಿತಾಂಶ ಪ್ರಕಟ, ಮುಂದಿನ ತರಗತಿಗೆ ರೆಡಿಯಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 5 ರಂದು PUC ಫಲಿತಾಂಶ ಪ್ರಕಟ, ಮುಂದಿನ ತರಗತಿಗೆ ರೆಡಿಯಾಗಿ

ಬೆಂಗಳೂರು: ಪ್ರಥಮ ಪಿಯುಸಿ ಫಲಿತಾಂಶ ಮೇ 5 ರಂದು ಪ್ರಕಟವಾಗಲಿದೆ. ಮುಂದಿನ ತರಗತಿ  ಶೈಕ್ಷಣಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದ್ದು ಈ ಕುರಿತು ಸುತ್ತೋಲೆ ಹೊರಡಿಸಿದೆ.

ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿರುವುದರಿಂದ ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದು, ಫಲಿತಾಂಶ ಪ್ರಕಟ ವಿಳಂಬವಾಗಿದೆ. ಹಲವು ಪರೀಕ್ಷೆಗಳನ್ನು ರದ್ದು ಮಾಡಿದ್ದು ಅನೇಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಮೇ 5 ರಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು. ಫೇಲಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜು ಮಟ್ಟದಲ್ಲಿ ನಿರ್ವಹಿಸಲು ಮಾನದಂಡಗಳನ್ನು ಮುಂದೆ ತಿಳಿಸಲಾಗುವುದು. ಖಾಸಗಿ ಕಾಲೇಜುಗಳು 2020 -21 ನೇ ಸಾಲಿನಲ್ಲಿ ಯಾವುದೇ ಕಾರಣಕ್ಕೂ ಬೋಧನಾ ಶುಲ್ಕವನ್ನು ಹೆಚ್ಚಳ ಮಾಡಬಾರದು. ಪೋಷಕರಿಂದ ವಿದ್ಯಾರ್ಥಿಗಳ ಶುಲ್ಕ ಪಾವತಿಗೆ ಒತ್ತಾಯ ಮಾಡಬಾರದು. ಶುಲ್ಕ ಪಾವತಿಸಲು ಇಚ್ಛೆ ಇರುವ ಪೋಷಕರಿಂದ ಕಂತುಗಳ ಮೂಲಕ ಶುಲ್ಕ ಸ್ವೀಕರಿಸಬಹುದಾಗಿದೆ ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...