ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಶೇಕಡ 41.28 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಕೊರೋನಾ ಕಾರಣದಿಂದ ವಾರ್ಷಿಕ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಬರೆಯಲು ಅವಕಾಶ ನೀಡಲಾಗಿತ್ತು. 2,12,678 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 87,784 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಕಲಾ ವಿಭಾಗದ ಶೇಕಡ 45.14 ರಷ್ಟು, ವಾಣಿಜ್ಯ ವಿಭಾಗದ ಶೇಕಡ 39.02 ರಷ್ಟು ಹಾಗೂ ವಿಜ್ಞಾನ ವಿಭಾಗದ ಶೇಕಡ 37.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಗೆ ಅಕ್ಟೋಬರ್ 16 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಪ್ರತಿ ವಿಷಯಕ್ಕೆ 530 ರೂ. ನಿಗದಿಮಾಡಲಾಗಿದೆ. ಮರುಮೌಲ್ಯಮಾಪನದ ಪ್ರತಿ ವಿಷಯಕ್ಕೆ 1,670 ರೂಪಾಯಿ ನಿಗದಿ ಮಾಡಲಾಗಿದ್ದು ಅಂಕಗಳ ಮರು ಎಣಿಕೆಗೆ ಶುಲ್ಕವಿರುವುದಿಲ್ಲ ಎಂದು ಹೇಳಲಾಗಿದೆ.