alex Certify SSLC, PUC ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC, PUC ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಬೆಂಗಳೂರು: ಲಾಕ್ಡೌನ್ ಜಾರಿಯಾಗಿದ್ದರಿಂದ ಮುಂದೂಡಲಾಗಿದ್ದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ಕೈಗೊಂಡಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಪರೀಕ್ಷೆಗೆ ಸಿದ್ಧತೆ ಆರಂಭಿಸಲು ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳ ಶೈಕ್ಷಣಿಕ ನಿರ್ದೇಶಕರೊಂದಿಗೆ ಸಂವಾದ ನಡೆಸಿದ ಸಚಿವರು, ಪರೀಕ್ಷೆಗೆ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಕಂಟೇನ್ಮೆಂಟ್ ವಲಯಗಳಲ್ಲಿರುವ ಪರೀಕ್ಷಾ ಕೇಂದ್ರಗಳನ್ನು ಸುರಕ್ಷಿತ ವಲಯಗಳಿಗೆ ಸ್ಥಳಾಂತರಿಸಬೇಕು. ಪರೀಕ್ಷೆಗೆ ವಿದ್ಯಾರ್ಥಿಗಳು ಕುಳಿತುಕೊಳ್ಳಲು ಅಗತ್ಯವಾದ ಡೆಸ್ಕ್, ಬೆಂಚ್ ಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕು. ಯಾವುದೇ ವಿದ್ಯಾರ್ಥಿ ನೆಲದ ಮೇಲೆ, ಬಯಲಿನಲ್ಲಿ ಪರೀಕ್ಷೆ ಬರೆಯಬಾರದು. ಪರೀಕ್ಷೆ ಉಪ ಕೇಂದ್ರಗಳನ್ನು ಸ್ಥಾಪಿಸಬೇಕು. ಕೊಠಡಿಯಲ್ಲಿ 24 ಮಕ್ಕಳ ಬದಲಿಗೆ ಕಡಿಮೆ ಸಂಖ್ಯೆಯ ಮಕ್ಕಳನ್ನು ಕೂರಿಸಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ವೈದ್ಯಕೀಯ ಸೌಲಭ್ಯ ನೀಡಬೇಕು ಎಂದು ತಿಳಿಸಿದ್ದಾರೆ.

ಅದೇ ರೀತಿ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಗೆ ಸಿದ್ಧತೆ ನಡೆಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ. ಇಂಗ್ಲಿಷ್ ಹೊರತುಪಡಿಸಿ ಬೇರೆ ವಿಷಯಗಳ ಪರೀಕ್ಷೆ ಪೂರ್ಣಗೊಂಡಿದ್ದು ಎಸ್ಎಸ್ಎಲ್ಸಿ ಪರೀಕ್ಷೆಗೆ ಮೊದಲು ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...