ಬೆಂಗಳೂರು: ಕ್ವಾರಂಟೈನ್ ಸೆಂಟರ್ ನಲ್ಲಿದ್ದ ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ ಇಬ್ಬರು ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ.
ಒಳಾಂಗಣ ವಿನ್ಯಾಸಕಾರನಾಗಿರುವ ಉತ್ತರಪ್ರದೇಶ ಮೂಲದ ಜೈಶಂಕರ್ ಬಂಧಿತ ಆರೋಪಿ. ಮುಂಬೈನಿಂದ ಆಗಮಿಸಿದ್ದ ಆತನನ್ನು ಯುವತಿಯರೊಂದಿಗೆ ಅದೇ ಕಟ್ಟಡದಲ್ಲಿ ಇರಿಸಲಾಗಿತ್ತು. ಗುರುವಾರ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಪೊಲೀಸರಿಗೆ ಯುವತಿಯರು ಮಾಹಿತಿ ನೀಡಿದ್ದು ಆರೋಪಿಯನ್ನು ಬಂಧಿಸಲಾಗಿದೆ.